ಆ.16ರಿಂದ ಕೇಂದ್ರ ಸಚಿವರಿಂದ ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ

ಹುಬ್ಬಳ್ಳಿ: ಕೇಂದ್ರ ಸಂಪುಟ ಇತ್ತೀಚೆಗೆ ಸೇರಿ ಸಚಿವರಾದ ರಾಜ್ಯದ ಸಂಸದರು ಆ.15ರಿಂದ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಸಚಿವರು ಪ್ರತಿ ಜಿಲ್ಲೆಗಳ ಕಾರ್ಯಕರ್ತರು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಮದು ತಿಳಿಸಿದರು.
ಆ.16ರಂದು ರಾಜೀವ್‌ ಚಂದ್ರಶೇಖರ್ ಅವರು ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಳೀಯರ ಜೊತೆ ಚರ್ಚೆ ಮಾಡಲಿದ್ದಾರೆ. ಹೊಸದಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ ಮತ್ತು ಭಗವಂತ್ ಖುಬಾ ಅವರು ಬೇರೆ, ಬೇರೆ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಲಿದ್ದಾರೆ ಎಂದರು.
ಜಿಲ್ಲೆಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ವೀರಣ್ಣ ಜಡಿ, ನಾರಾಯಣ ಜರತಾರಘರ್‌, ಸಿದ್ದು ಮೊಗಲಿಶೆಟ್ಟರ್‌, ರವಿ ನಾಯ್ಕ ಇದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement