ಟೋಕಿಯೊ ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ 6 ಕೋಟಿ ರೂ.ಬಹುಮಾನ ಘೋಷಿಸಿದ ಹರಿಯಾಣ

ನವದೆಹಲಿ: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಜಾವಲಿನ್​ ಎಸೆತದಲ್ಲಿ ಹರಿಯಾಣ ಮೂಲದ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದು ದೇಶದ ಅಥ್ಲೆಟಿಕ್ಸ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಒಲಿಂಪಿಕ್ಸ್​ ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಸ್ವರ್ಣ ಪದಕವನ್ನು ತಂದು ಕೊಟ್ಟ ಕೀರ್ತಿ ನೀರಜ್​ಗೆ ಸಲ್ಲುತ್ತದೆ. ಇದಕ್ಕೆ ಅವರ ರಾಜ್ಯವಾದ ಹರಿಯಾಣ ಸರ್ಕಾರ 6 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶನಿವಾರ 6 ಕೋಟಿ ನಗದು ಬಹುಮಾನ ಮತ್ತು ಅಥ್ಲೆಟಿಕ್ಸ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಸರ್ಕಾರಿ ಉದ್ಯೋಗ ಘೋಷಿಸಿದ್ದಾರೆ. ನೀರಜ ಚೋಪ್ರಾ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಖಟ್ಟರ್ ಅವರು ಕೇವಲ ಪದಕ ಗೆದ್ದಿಲ್ಲ, ಇಡೀ ದೇಶದ ಹೃದಯ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.
ಚಿನ್ನದ ಹುಡುಗ ನೀರಜ್​ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಸರ್ಕಾರವೂ ಬಹುಮಾನ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ‘ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಇತಿಹಾಸ ಬರೆದಿದೆ. ನೀರಜ್​ ಚೋಪ್ರಾ ಅವರ ಇಂದಿನ ಸಾಧನೆ ಅವಿಸ್ಮರಣೀಯ. ಅವರ ಸಾಧನೆ ಮತ್ತು ಉತ್ಸಾಹ ಎಲ್ಲರಿಗೂ ಪ್ರೇರಣೆ. ಚಿನ್ನ ಗೆದ್ದ ನೀರಜ್​ ಅವರಿಗೆ ಅಭಿನಂದನೆಗಳು’ ಎಂದು ಟ್ವೀಟ್​ ಮಾಡಿದ್ದಾರೆ.
ನೀರಜ್​ ಸಾಧಾನೆ ಇತಿಹಾಸ ಸೃಷ್ಟಿಸಿದೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪ್ರಶಂಸಿಸಿದ್ದಾರೆ.
ಚಿನ್ನದ ಹುಡುಗ ನೀರಜ್​ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement