ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ.
ಈ ಸಂಬಂಧ ಆಡಳಿತ ಮತ್ತು ಸುಧಾರಣೆ ಇಲಾಖೆ ಇಂದು ಅಧಿಸೂಚನೆ ಹೊರಡಿಸಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿ ಇರುವವರೆಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ ಮುಂದುವರಿಯಲಿದೆ.
ಅಲ್ಲದೆ, ತಿಂಗಳಿಗೆ ಮೂರು ಲಕ್ಷ ರೂ ಭತ್ಯೆ, ಒಂದು ಲಕ್ಷ ರೂಪಾಯಿ ಬಾಡಿಗೆ ಹಾಗೂ ಸಾರಿಗೆಭತ್ಯೆ ಪಡೆಯಲು ಯಡಿಯೂರಪ್ಪ ಅರ್ಹರಾಗಿರುತ್ತಾರೆ.
ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರಿಗೆ ಈ ಸೌಲಭ್ಯ ನೀಡಿರಲಿಲ್ಲ. ಲಾಭದಾಯಕ ಹುದ್ದೆ ಕಾಯ್ದೆ ಅಡ್ಡಿ ಬರಬಹುದು ಎಂಬ ಕಾರಣಕ್ಕಾಗಿ ಆಗಿನ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯ ಅವರಿಗೆ ಇಂತಹ ಅವಕಾಶ ಮಾಡಿಕೊಟ್ಟಿರಲಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement