ರೈಲು ನಿಲ್ದಾಣ, ಅಮಿತಾಬ್‌ ಬಚ್ಚನ್‌ ಮನೆಗೆ ಬಾಂಬ್‌ ಬೆದರಿಕೆ ಕರೆ: ಇಬ್ಬರ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಬಾಂಬ್ ಇಟ್ಟಿರುವ ಬಗ್ಗೆ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈನ ಮೂರು ಪ್ರಮುಖ ರೈಲ್ವೆ ನಿಲ್ದಾಣಗಳು ಮತ್ತು ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಬಂಗಲೆಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ರಾತ್ರಿ ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಮಾಡಿರುವ ಅನಾಮಿಕ ವ್ಯಕ್ತಿ, ಜುಹುನಲ್ಲಿರುವ ಅಮಿತಾಭ್ ಬಚ್ಚನ್ ನಿವಾಸ ಹಾಗೂ ಮುಂಬೈನ ಮೂರು ರೈಲ್ವೇ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟ ಬಗ್ಗೆ ತಿಳಿಸಿದ್ದಾರೆ.
ಕೂಡಲೇ ಕಾರ್ಯಪ್ರವೃತ್ತರಾದ ಮುಂಬೈ ಪೊಲೀಸರು ಕರೆಯನ್ನಾಧರಿಸಿ ಹುಡುಕಾಟ ನಡೆಸಿದರು, ಆದರೆ ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ. ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.
ಕರೆ ಮಾಡಿದ್ದ ವ್ಯಕ್ತಿಗಳು, ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್, ದಾದಲ್ ಹಾಗೂ ಬೈಕುಲ್ಲಾ ರೈಲ್ವೇ ನಿಲ್ದಾಣ, ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರುೀಗ ಈ ಪಕ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement