
ಯಾದಗಿರಿ : ಈ ಭಾಗದ ಆರಾದ್ಯ ದೈವ ಹೊರ ರಾಜ್ಯಗಳಿಂದಲೂ ಅಪಾರ ಭಕ್ತರು ಆಗಮಿಸುವ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದಿನಿಂದ ಶ್ರಾವಣ ಮುಗಿಯುವ ವರೆಗೆ ದರ್ಶನಕ್ಕೆ ಭಕ್ತರ ಪ್ರವೇಶ ನೀಷಧಿಸಿ ಜಿಲ್ಲಾಡಳಿತ ಆದೇಶ ಮಾಡಿದೆ.
ರಾಜ್ಯದಲ್ಲಿ ಮೂರನೆಯ ಕೊರೊನಾ ಅಲೆ ಭೀತಿ ಹಿನ್ನೆಲೆಯಲ್ಲಿ ಮೈಲಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ೧ ಕಿಮೀ ಸುತ್ತ ಸ್ಥಳೀಯ ಜನರ ಹೊರತುಪಡೆಸಿ ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆದೇಶ ಮಾಡಿದ್ದಾರೆ.
ಭಾನುವರ ರಾಜ್ಯದ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ದರ್ಶನಕ್ಕೆ ಬರುತ್ತಿದ್ದರು. ಅದರಲ್ಲಿಯು ಶ್ರಾವಣ ಮಾಸದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಇತ್ತೀಚಿಗಷ್ಟೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಶೇಷವಾಗಿ ಶ್ರಾವಣ ಮಾಸ ಇರುವುದುರಿಂದ ತಮ್ಮ ಕುಲದೇವರ ದರ್ಶನಕ್ಕೆ ಸಾವಿರಾರು ಭಕ್ತರು ಬರುತ್ತಿದ್ದರು. ಆದರೆ ಮತ್ತೆ ಪ್ರವೇಶಕ್ಕೆ ನಿರ್ಬಂಧ ಹಾಕಿರುವುದರಿಂದ ತೀವ್ರ ನಿರಾಸಗೊಂಡಿದ್ದಾರೆ. ಆದರೆ ಕೊರೊನಾ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.



ನಿಮ್ಮ ಕಾಮೆಂಟ್ ಬರೆಯಿರಿ