ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸಾವಿನ ಸಂಖ್ಯೆ ಇಳಿಮುಖ

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಕೊರೊನಾ ಮರಣ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅದೇರೀತಿ ದಯನಂದಿನ ಸೋಂಕಿನಲ್ಲಿಯೂ ತುಸು ಕಡಿಮೆಯಾಗಿದೆ.
ರಾಜ್ಯದಲ್ಲಿ ಭಾನುವಾರ 1598 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1914 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 20 ಮಂದಿ ಕೊರೊನಾ ವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಈವರೆಗೂ 36793 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2918525ಕ್ಕೆ ಏರಿಕೆಯಾಗಿದೆ. ಒಟ್ಟು 2857776 ಸೋಂಕಿತರು ಗುಣಮುಖರಾಗಿದ್ದು. 23930 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.09ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.25ರಷ್ಟಿದೆ.
ಬೆಂಗಳೂರಿನಲ್ಲಿ ಭಾನುವಾರ 348 ಮಂದಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230486ಕ್ಕೆ ಏರಿಕೆಯಾಗಿದೆ. ಒಬ್ಬರು ಮೃತಪಟ್ಟಿದ್ದಾರೆ.ಒಟ್ಟು ಸಾವಿನ ಸಂಖ್ಯೆ 15914ಕ್ಕೆ ಏರಿಕೆಯಾಗಿದೆ. 8493 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿಗಿಂತ ಹೆಚ್ಚು ದೈನಂದಿನ ಸೋಂಕು ದಕ್ಷಿಣ ಕನ್ನಡದಲ್ಲಿ ಕಂಡುಬಂದಿದೆ. ದಕ್ಷಿಣ ಕನ್ನಡದಲ್ಲಿ ಭಾನುವಾರ ದಕ್ಷಿಣ ಕನ್ನಡ 438 ಹೊಸ ಸೋಂಕು ದಾಖಲಾಗಿದೆ. ಉಳಿದಂತೆ ಉಡುಪಿ- 129, ಮೈಸೂರು -98, ಕೊಡಗು- 83 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಮೂರು ತಿಂಗಳ ಬಳಿಕ ಸಮಾಧಿ ಅಗೆದು ತಾಯಿಯ ಶವವನ್ನು ಬೈಕ್​ನಲ್ಲಿ ತಂದ ಮಕ್ಕಳು...!

08-08-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement