ಚಿನ್ನ ಗೆದ್ದ ನೀರಜಗೆ ಕ್ರೀಡಾ ಸಚಿವರಿಂದ ಅಭಿನಂದನೆ: ತರಬೇತಿ ನೀಡಿದ ಕನ್ನಡಿಗ ಕಾಶಿನಾಥ್​​ಗೆ 10 ಲಕ್ಷ ರೂ.ಘೋಷಣೆ

ಬೆಂಗಳೂರು:ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಚಿನ್ನ ತಂದುಕೊಟ್ಟ ನೀರಜ್ ಛೋಪ್ರಾಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆಗೆ ತರಬೇತಿ ನೀಡಿದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು 10 ಲಕ್ಷ ರೂ.ಗಳ ಬಹುಮಾನ ಘೋಷಿಸಿದ್ದಾರೆ.
ನೀರಜ್ ಛೋಪ್ರಾ ಚಿನ್ನದ ಪದಕ ಗೆಲ್ಲುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಛೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ವೆಲ್ತ್ ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು. ನೀರಜ್ ಚೋಪ್ರಾ ಸಾಧನೆಗೆ ಬೆನ್ನೆಲುಬಾದ ಕಾಶಿನಾಥ್ ನಾಯ್ಕ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 10 ಲಕ್ಷ ರೂ.ಗಳ ನಗದು ಬಹುಮಾನ ಘೋಷಿಸಲಾಗಿದೆ..
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುತ್ತದೆ. ಕ್ರೀಡಾಸಚಿವ ಡಾ. ನಾರಾಯಣಗೌಡ ಅವರು, ಎಲ್ಲ ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸಲು ತೀರ್ಮಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅದಿತಿ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಹಾಗೂ ಅವರನ್ನೂ ಸನ್ಮಾನಿಸಲಾಗುವುದು‌ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement