ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ, ಫಲಿತಾಂಶ ನೋಡಲು ಹೀಗೆ ಮಾಡಿ..

ಬೆಂಗಳೂರು :ಸೋಮವಾರ (ಆಗಸ್ಟ್‌ 9) ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿವ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್‌ 9ರಂದು (ನಾಳೆ )ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದರು.
ಕೊರೊನಾ ಭೀತಿಯ ನಡುವೆಯೂ ಈ ಬಾರಿ 8.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಕ್ರಮ ಅನುಸರಿಸಿ
ನಾಳೆ ಪ್ರಕಟಗೊಳ್ಳಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ, sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಈ ಜಾಲತಾಣಗಳಿಗೆ ಭೇಟಿ ನೀಡಿ, ನಿಮ್ಮ ನೋಂದಣಿ ಸಂಖ್ಯೆ ನಮೂಸಿದಿಸಿ ವೀಕ್ಷಿಸಬಹುದಾಗಿದೆ.
ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್​ಸೈಟ್​ನಲ್ಲಿ ಕೂಡ ರಿಸಲ್ಟ್​ ನೋಡಬಹುದು.
kseeb.kar.nic.in ಅಥವಾ karresults.nic.in ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ವೆಬ್​ಸೈಟ್​ ಓಪನ್ ಮಾಡಿ ನಂತರ ಹೋಂ ಪೇಜ್​ನಲ್ಲಿ ಎಸ್​ಎಸ್​ಎಲ್​ಸಿ ರಿಸಲ್ಟ್​ ಎಂಬ ಆಯ್ಕೆ ಒತ್ತಿ
ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್​ನಲ್ಲಿ ಕೇಳುವ ಮಾಹಿತಿ ಭರ್ತಿ ಮಾಡಿ.
ಹಾಲ್​ ಟಿಕೆಟ್​ನ ಮಾಹಿತಿಯನ್ನು ವೆಬ್​ಸೈಟ್​ನಲ್ಲಿ ವೇರಿಫೈ ಮಾಡಿ.
ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.
ನಂತರ ಆ ಫಲಿತಾಂಶವನ್ನು ಪಿಡಿಎಫ್​ ಫಾರ್ಮಾಟ್​ನಲ್ಲಿಯೇ ಡೌನ್​ಲೋಡ್ ಮಾಡಿಕೊಳ್ಳಿ.

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement