ಭಾರತದಲ್ಲಿ 39,070 ಹೊಸ ಸೋಂಕುಗಳ ವರದಿ, 491 ಸಾವು

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಸಾಂಕ್ರಾಮಿಕ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 39,070 ಹೊಸ ಸೋಂಕು ಪ್ರಕರಣಗಳು ಮತ್ತು 491 ಸಾವುಗಳು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶಾದ್ಯಂತ 24 ಗಂಟೆಗಳಲ್ಲಿ 39,070 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 3,19,34,455ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,27,862ಕ್ಕೆ ಏರಿಕೆಯಾಗಿದೆ. ಕಲೆದ 24 ಗಂಟೆಗಳಲ್ಲಿ ದೇಶಾದ್ಯಂತ 43,910 ಸೋಂಕಿತರು ಗುಣಮುಖರಾಗಿದ್ದು. ದೇಶದ ಗುಣಮುಖರ ಸಂಖ್ಯೆ 3,10,99,771 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 4,06,822 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 55,91,657 ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಒಟ್ಟಾರೆ ಲಸಿಕೆ ವಿತರಣೆ ಪ್ರಮಾಣ 50,68,10,492ಕ್ಕೆ ಏರಿಕೆಯಾಗಿದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement