ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 7 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಸೋಮವಾರ ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಪ್ರದೇಶವಾದ ಶಿವಮೊಗ್ಗ, ಚಿಕ್ಕಮಗಳೂರು, . ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಏಳು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಾವಣಗೆರೆ, ರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, 3ಮೀಟರ್ ಗಳಿಗೂ ಹೆಚ್ಚು ಎತ್ತರದ ಅಲೆಗಳು ಏಳುವ ಮನ್ಸೂಚನೆ ಇದೆ. ಮೀನುಗಾರರು ಆ.11ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಲಮಟ್ಟಿ ಜಲಾಶಯಕ್ಕೆ ೧,೦೮,೮೪೪ ಕ್ಯುಸೆಕ್ಸ್ ಒಳಹರಿವು ಇದೆ. ನಾರಾಯಣಪುರ ಜಲಾಶಯಕ್ಕೆ ೪೫,೪೮೪ ಕ್ಯುಸೆಕ್ಸ್ ನೀರು ಹರಿದು ಬರುತ್ತಿದೆ. ಭದ್ರಾ ಜಲಾಶಯಕ್ಕೆ ೧೯,೪೦೨ ಕ್ಯುಸೆಕ್ಸ್, ಲಿಂಗನಮಕ್ಕಿ ಜಲಾಶಯಕ್ಕೆ ೨೪,೭೧೬ ಕ್ಯುಸೆಕ್ಸ್ ನೀರು ಹರಿದು ಬರುತ್ತಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement