ವೆಂಕಟಪುರ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕನ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಾಗಟ್ಟಿ ಬೈಲ ಹೆಗ್ಗಲ ವೆಂಕಟಪುರ ನದಿಯಲ್ಲಿ ಯುವಕನೊಬ್ಬ ನೀರು ಪಾಲಾದ ಘಟನೆ ಭಾನುವಾರ ನಡೆದ ವರದಿಯಾಗಿದೆ.
ಭಾನುವಾರ ಮಧ್ಯಾಹ್ನ ನೀರುಪಾಲಾದ ಯುವಕನನ್ನು ಜಯಂತ ರಾಮಗೊಂಡ (೧೯) ಎಂದು ಗುರುತಿಸಲಾಗಿದೆ,
ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಈತ ಇಳಿದ ಸಂದರ್ಭದಲ್ಲಿ ಆಕಸ್ಮಿಕ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ನೂರಾರು ಸ್ಥಳೀಯರು ಆಗಮಿಸಿದ್ದರು. ಕೆಲವು ಸ್ಥಳೀಯ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಯುವಕನ ಶವನ್ನು ಮೇಲಕ್ಕೆ ಎತ್ತಲಾಗಿದೆ, ಶವವನ್ನು ಸರ್ಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ, ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement