ಬೆಂಗಳೂರು :ಸೋಮವಾರ (ಆಗಸ್ಟ್ 9) ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿವ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್ 9ರಂದು (ನಾಳೆ )ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದರು.
ಕೊರೊನಾ ಭೀತಿಯ ನಡುವೆಯೂ ಈ ಬಾರಿ 8.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಕ್ರಮ ಅನುಸರಿಸಿ
ನಾಳೆ ಪ್ರಕಟಗೊಳ್ಳಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ, sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಈ ಜಾಲತಾಣಗಳಿಗೆ ಭೇಟಿ ನೀಡಿ, ನಿಮ್ಮ ನೋಂದಣಿ ಸಂಖ್ಯೆ ನಮೂಸಿದಿಸಿ ವೀಕ್ಷಿಸಬಹುದಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
kseeb.kar.nic.in ಅಥವಾ karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ವೆಬ್ಸೈಟ್ ಓಪನ್ ಮಾಡಿ ನಂತರ ಹೋಂ ಪೇಜ್ನಲ್ಲಿ ಎಸ್ಎಸ್ಎಲ್ಸಿ ರಿಸಲ್ಟ್ ಎಂಬ ಆಯ್ಕೆ ಒತ್ತಿ
ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್ನಲ್ಲಿ ಕೇಳುವ ಮಾಹಿತಿ ಭರ್ತಿ ಮಾಡಿ.
ಹಾಲ್ ಟಿಕೆಟ್ನ ಮಾಹಿತಿಯನ್ನು ವೆಬ್ಸೈಟ್ನಲ್ಲಿ ವೇರಿಫೈ ಮಾಡಿ.
ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.
ನಂತರ ಆ ಫಲಿತಾಂಶವನ್ನು ಪಿಡಿಎಫ್ ಫಾರ್ಮಾಟ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ.
ನಿಮ್ಮ ಕಾಮೆಂಟ್ ಬರೆಯಿರಿ