ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋದ ಯುವಕ, ಶೋಧ ಕಾರ್ಯಾಚರಣೆ

ಕಾರವಾರ: ಸಮುದ್ರದಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ನಡೆದಿದೆ.
ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ನೀರಿನಲ್ಲಿ ಮುಳಗಿ ನಾಪತ್ತೆಯಾದ ಯುವಕ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಎಂಟು ಮಂದಿ ಇಂದು (ಸೋಮವಾರ) ಬೆಳಿಗ್ಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಕಡಲ ಅಬ್ಬರ ಹೆಚ್ಚಾಗಿದ್ದರಿಂದ ಸಮುದ್ರಕ್ಕೆ ಇಳಿಯದಂತೆ ಸ್ಥಳೀಯರು ಎಚ್ಚರಿಕೆ ನೀಡಿದ್ದರೂ ಎಂಟು ಜನ ಈಜಲು ಸಮುದ್ರಕ್ಕೆ ಇಳಿದಿದ್ದಾರೆ ಎನ್ನಲಾಗಿದೆ.
ಅಲೆಯ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದರು. ಈ ವೇಳೆ ಓರ್ವನನ್ನು ಲೈಫ್ ಗಾರ್ಡ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದೆ. ಸಮುದ್ರಕ್ಕೆ ಇಳಿದಿದ್ದ ಉಳಿದವರು ದಡ ಸೇರಿದ್ದಾರೆ. ಆದರೆ ಅಲೆಗಳ ಅಬ್ಬರಕ್ಕೆ ಅರುಣ್ ತೇಲಿ ಹೋಗಿದ್ದಾನೆ. ಈತನ ಪತ್ತೆಗಾಗಿ ಪೊಲೀಸರು ಹಾಗೂ ಲೈಫ್ ಗಾರ್ಡ್ ಗಳು ಶೋಧ ಕಾರ್ಯ ಮುಂದುವರೆಸಿದ್ದು ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement