ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉತ್ತರ ಕನ್ನಡ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ

ಶಿರಸಿ/ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರಿಗೆ ಹಾಗೂ ಕಾರವಾರ ಜಿಲ್ಲೆಯ ಓರ್ವ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.ಶಿರಸಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಸಿದ್ದಾಪುರ ತಾಲ್ಲೂಕಿನ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಕಾನಸೂರಿನ ಕಾಳಿಕಾ ಭವಾನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರೇಷ್ಮಾ ಗಣೇಶ ಹೆಗಡೆ ಮತ್ತು ಎಸ್.ಎನ್.ಸುನಯ್ ಹಾಗೂ ಸಿದ್ದಾಪುರ ಪಟ್ಟಣದ ಪ್ರಶಾಂತಿ ಆಂಗ್ಲ ಮಾಧ್ಯಮ ಶಾಲೆಯ ಹೇಮಾ ಉಮೇಶ ಹೆಗಡೆ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು.
ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ 625ಕ್ಕೆ 625 ಅಂಕ ಪಡೆದಿದ್ದಾಳೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪ ಸರ್ಕಾರಿ ಪ್ರಾಥಮಿಕ ಫ್ರೌಡಶಾಲೆಯ ಭೂಮಿಕ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement