ಕರ್ನಾಟಕದಲ್ಲಿ ಸೋಮವಾರ 1,186 ಕೊರೊನಾ ಹೊಸ ಸೋಂಕು, ಪಾಸಿಟಿವಿಟಿ ದರ ಶೇ.0.89

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 1,186 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇದೇ ಸಮಯದಲ್ಲಿ 1,776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಒಂದು ಸಾವು ಸೇರಿದಂತೆ ರಾಜ್ಯದಲ್ಲಿ ಸೋಮವಾರ 24 ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ರೇಟ್ ಶೇ.0.89ರಷ್ಟಿದೆ. ಸದ್ಯ ರಾಜ್ಯದಲ್ಲಿ 23,316 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿಂದು 296 ಜನಕ್ಕೆ ಸೋಂಕು ತಗುಲಿದ್ದು, 8,378 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,32,192 ಸ್ಯಾಂಪಲ್‍ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.ರಾಜ್ಯದಲ್ಲಿ ಇದುವರೆಗೂ 29,19,711 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 36,817 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಮರಣ ಪ್ರಮಾಣ ಶೇ.2.08ರಷ್ಟಿದೆ. ಬೆಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಮಹಾಮಾರಿ ಮೂರಂಕಿ ದಾಟಿದೆ.
ಬೆಂಗಳೂರು ನಗರ 296, ದಕ್ಷಿಣ ಕನ್ನಡ 273, ಕೊಡಗು 83, ಮೈಸೂರು 82, ಉಡುಪಿ 81 ಹೊಸ ಪ್ರಕರಣಗಳು ದಾಖಲಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

09-08-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement