ದೇಶದ 9.75 ಕೋಟಿ ರೈತರ ಖಾತೆಗೆ 19.5 ಸಾವಿರ ಕೋಟಿ ರೂ. ಜಮೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ದೇಶದ 9.75 ಕೋಟಿ ರೈತರಿಗೆ 19,5೦೦ ಕೋಟಿ ರೂ.ಗಳನ್ನು ಇಂದು (ಸೋಮವಾರ) ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಭೆಯ ಮೂಲಕ ಹಣ ಪಾವತಿಗೆ ಚಾಲನೆ ನೀಡಿದರು. ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ಆರು ಸಾವಿರ ರೂ.ಗಳನ್ನು ರೈತರ ಖಾತೆಗೆ ಪಾವತಿ ಮಾಡಲಾಗುತ್ತದೆ.
ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಗಳನ್ನು ಪಾವತಿಸುವ ಈ ಯೋಜನೆಯನ್ನು 2019ರ ಫೆಬ್ರವರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದರು. ಈವರೆಗೂ ಯೋಜನೆಯಡಿ 1.57 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ಪಾವತಿಸಲಾಗಿದೆ.
ಪ್ರಧಾನ ಮಂತ್ರಿ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಈವರೆಗೂ ಒಂಭತ್ತು ಕಂತುಗಳಲ್ಲಿ 11 ಕೋಟಿ ರೈತರಿಗೆ 1.37 ಲಕ್ಷ ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು. ಕಿಸಾನ್ ಸನ್ಮಾನ್ ನಿಧಿಯ 2.28 ಕೋಟಿ ಫಲಾನುಭವಿಗಳನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯಕ್ಕೆ ಸಂಪರ್ಕಿಸಲಾಗಿದೆ.
ರಾಜ್ಯದ 51.19 ಲಕ್ಷ ರೈತರಿಗೆ ಹಣ ಬಿಡುಗಡೆ:
ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಯೋಜನೆಯಡಿ ಸೋಮವಾರ ಎರಡನೇ ಕಂತಿನಲ್ಲಿ ಕರ್ನಾಟಕ ರಾಜ್ಯದ 51.19 ಲಕ್ಷ ರೈತರಿಗೆ 1,023 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದ್ದು, ಎರಡನೇ ಕಂತಿನಲ್ಲಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.
ಇಲ್ಲಿಯವರೆಗೆ 55.06 ಲಕ್ಷ ರೈತ ಕುಟುಂಬಗಳು 1 ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿದ್ದು, 2019ರ ಮಾರ್ಚ್ ನಿಂದ ಜುಲೈ 2021 ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6,940.07 ಕೋ.ರೂಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement