ರಾಜ್ಯಾದ್ಯಂತ ಲಾಕ್‌ಡೌನ್ ಜಾರಿ ಇಲ್ಲ ಎಂದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರಾಂತ್ಯ ಕರ್ಫ್ಯೂ ಮತ್ತು ಕೊರೊನಾ ವೈರಸ್ ಹರಡುವುದನ್ನು ತಡೆಯಲು ಹೆಚ್ಚುವರಿ ನಿರ್ಬಂಧಗಳನ್ನು ಘೋಷಿಸಿದ ನಂತರ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿ ತರುವ ಪ್ರಶ್ನೆಯೇ ಸದ್ಯ ಇಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೊಮ್ಮಾಯಿ ಅವರ ಕ್ಯಾಬಿನೆಟ್‌ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ಉಳಿಸಿಕೊಂಡ ಸುಧಾಕರ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ, ರಾಜ್ಯಾದ್ಯಂತ ಲಾಕ್‌ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ, ಮಹಾರಾಷ್ಟ್ರ ಮತ್ತು ಕೇರಳದ ಗಡಿ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ. ರಾಜ್ಯವು ರಾತ್ರಿ ಕರ್ಫ್ಯೂ ಮತ್ತು ಸಭೆಗಳ ಮೇಲೆ ನಿರ್ಬಂಧಗಳಂತಹ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.
ಮಂಗಳೂರು, ಉಡುಪಿ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು, ತಾಂತ್ರಿಕ ಸಲಹಾ ಸಮಿತಿಯ (ಟಿಎಸಿ) ಸಲಹೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಆಗಸ್ಟ್ 6 ರಂದು ಕೇರಳ ಮತ್ತು ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಜಾರಿಗೆ ತಂದಿದೆ ಮತ್ತು ಎಂಟು ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಘೋಷಿಸಿದೆ. ರಾತ್ರಿ ಕರ್ಫ್ಯೂ ಕೂಡ ಒಂದು ಗಂಟೆ ಹೆಚ್ಚು ಮಾಡಲಾಗಿದೆ. ಕರ್ಫ್ಯೂ ರಾತ್ರಿ 9 ರಿಂದ ಆರಂಭವಾಗಿ ಮರುದಿನ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೆ ತರಲಾಗಿದೆ ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.
ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರದೇಶದ ವ್ಯಾಪ್ತಿಯಲ್ಲಿ 162 ಮೈಕ್ರೋ-ಕಂಟೈನ್‌ಮೆಂಟ್ ವಲಯಗಳಿವೆ. ಅವರು ರಾಜ್ಯದಲ್ಲಿ ಲಸಿಕೆ ಹಾಕುವಿಕೆಯ ಬಗ್ಗೆ ಮಾತನಾಡಿದರು ಮತ್ತು ಕೋವಿಡ್ -19 ಲಸಿಕೆಗಳ ಕೊರತೆಯ ಕ್ಲೇಮುಗಳನ್ನು ನಿರಾಕರಿಸಿದರು.
ಕರ್ನಾಟಕವು ಭಾನುವಾರ 1,598 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಕೇರಳದ ಗಡಿ 438 ಪ್ರಕರಣಗಳನ್ನು ವರದಿ ಮಾಡಿದೆ, ಬೆಂಗಳೂರು ನಗರ ಜಿಲ್ಲೆಯು 348 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement