ವೆಬ್​ಸೈಟ್ ಓಪನ್‌ ಆಗದೆ ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಣೆಗೆ ವಿದ್ಯಾರ್ಥಿಗಳ ಹರಸಾಹಸ: ಸಂಜೆ ನಂತರ ಸಲೀಸು

ಬೆಂಗಳೂರು: ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟಿಸಿದ್ದಾರೆ.
ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳಿಗೆ ಸಂಜೆಯ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ..ಅಲ್ಲದೆ, ಮೆಸೇಜ್ ಮೂಲಕ ವಿದ್ಯಾರ್ಥಿಗಳು ತಮ್ಮ ತಮ್ಮ ಮೊಬೈಲ್​ಗಳಲ್ಲೇ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಸಹ ಅವರು ಹೇಳಿದ್ದಾರೆ.
ಆದರೆ ವಿದ್ಯಾರ್ಥಿಗಳು ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಮತ್ತು ಸೈಬರ್ ಸೆಂಟರ್​ಗಳ ಮೂಲಕ ಫಲಿತಾಂಶ ಪಡೆದುಕೊಳ್ಳಲು ಯತ್ನಿಸುತ್ತಿದ್ದರೂ ವೆಬ್​ಸೈಟ್ ಮೂಲಕ ಫಲಿತಾಂಶ ದೊರೆಯುತ್ತಿಲ್ಲ. ವೆಬ್​ಸೈಟ್ ಓಪನ್ ಆಗದೆ ವಿದ್ಯಾರ್ಥಿಗಳು ತೊಂದರೆ ಪಡುವುದು ಹಲವೆಡೆ ವರದಿಯಾಗಿದೆ. ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಸಾಹಸ ಪಡುತ್ತಿದ್ದಾರೆ.ಇದು ಸಂಜೆಯ ವೇಳೆಗೆ ಸುಲಭವಾಗಿ ದೊರೆಯಬಹುದು ಎಂದು ಹೇಳಾಗಿದೆ.
ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.
ಈ ವೆಬ್ಸೈಟುಗಳಲ್ಲಿ ಫಲಿತಾಂಶ ವೀಕ್ಷಿಸಿ sslc.karnataka.gov.in, kseeb.kar.nic.in, karresults.nic.in
ನಿಮ್ಮ ಎಸ್ಎಸ್ಎಲ್‌ಸಿ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ,
*ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ
* ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
* ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
*. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
* ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
*. ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು, ಅಲ್ಲಿಂದಲೇ ಡೌನ್ಲೋಡ್ ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement