ಕೊರೊನಾ ಹೊಸ ಸೋಂಕು: ಬೆಂಗಳೂರು ಮೀರಿಸಿದ ದಕ್ಷಿಣ ಕನ್ನಡ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಂಗಳವಾರ (ಆಗಸ್ಟ್ 10) ಹೊಸದಾಗಿ 1,338 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೇ ಸಮಯದಲ್ಲಿ 31 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ. ಒಟ್ಟು 28,61,499 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,848 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 22,676 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಗಳೂರು ನಗರಕ್ಕಿಂತ ಹೆಚ್ಚು ಹೊಸ ಸೋಂಕು ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 315 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,31,097 ಕ್ಕೆ ಏರಿಕೆಯಾಗಿದೆ. 12,06,980 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾ ಸೋಂಕಿಗೆ 3 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 15,918 ಜನರ ಸಾವು ಸಂಭವಿಸಿದೆ. 8,198 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ದಕ್ಷಿಣ ಕನ್ನಡದಲ್ಲಿ ಇಂದು ಕೊರೊನಾ ಸೋಂಕಿಗೆ 8 ಮಂದಿ ಮೃತಪಟ್ಟಿದ್ದರೆ ಉತ್ತರ ಕನ್ನಡದಲ್ಲಿ 4 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರು ನಗರ, ಹಾಸನದಲ್ಲಿ ತಲಾ 3 ಮಂದಿ ಕೊವಿಡ್​19ರಿಂದ ಮೃತಪಟ್ಟಿದ್ದಾರೆ. ಕೋಲಾರ, ಮೈಸೂರು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಕೊಡಗು, ಕೊಪ್ಪಳ, ಮಂಡ್ಯ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 1 ಕೊರೊನಾ ಮರಣಗಳು ವರದಿಯಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

10-08-2021 HMB Kannada

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement