ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯಕ್ಕೆ ಅಧಿಕಾರ; ಸಂವಿಧಾನ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ

ನವದೆಹಲಿ: ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆ (OBC Reservation Amendment Bill 2021) ಇಂದು (ಮಂಗಳವಾರ) ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿದೆ.
ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿಈ ಮಸೂದೆ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ
ನಿನ್ನೆಯ ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಲಾಗಿರುವ ಈ ಸಂವಿಧಾನ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳು ಕೂಡ ಬೆಂಬಲ ನೀಡಿದ್ದವು. ಹೀಗಾಗಿ, ಸೋಮವಾರ ಲೋಕಸಭಾ ಕಲಾಪದಲ್ಲಿ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಮಂಡಿಸಿ ಮಾತನಾಡಿದ್ದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ವೀರೇಂದ್ರ ಕುಮಾರ್‌, ‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಆದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರ ಪಟ್ಟಿ ತಯಾರಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನದ 342ಎ ಮತ್ತು ಅದರ ಜೊತೆಗೆ 338ಬಿ ಹಾಗೂ 366ನೇ ವಿಧಿಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

ಈ ಹಿಂದೆ ಮಹಾರಾಷ್ಟ್ರದ ಮರಾಠಾ ಮೀಸಲು ಪ್ರಕರಣದ ತೀರ್ಪು ನೀಡುವ ಸಂವಿಧಾನದ 342ಎ ವಿಧಿಯನ್ನು ತನ್ನದೇ ಆದ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದ ಸುಪ್ರೀಂಕೋರ್ಟ್‌, ಒಬಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರ ಕೇವಲ ರಾಷ್ಟ್ರಪತಿಗಳಿಗೆ ಮಾತ್ರ ಇದೆ, ರಾಜ್ಯಗಳಿಗೆ ಈ ಅಧಿಕಾರ ಇಲ್ಲವಾದ್ದರಿಂದ ಮಹಾರಾಷ್ಟ್ರ ಸರ್ಕಾರ ಮರಾಠ ಸಮುದಾಯಕ್ಕೆ ನೀಡಿದ್ದ ಮೀಸಲು ರದ್ದುಪಡಿಸಬೇಕು ಎಂದು ಆದೇಶ ಹೊರಡಿಸಿತ್ತು. ಈ ಪ್ರಕರಣದ ವಿಚಾರಣೆ ವೇಳೆ, 342ಎ ವಿಧಿಯನ್ನು ಕೇವಲ ರಾಷ್ಟ್ರೀಯ ಹಿಂದುಳಿದ ಆಯೋಗದ ರಚನೆಗಾಗಿ ಮಾಡಲಾಗಿದೆ, ಇದರಿಂದ ಒಬಿಸಿ ಪಟ್ಟಿ ರಚಿಸುವ ರಾಜ್ಯಗಳ ಅಧಿಕಾರ ಮೊಟಕುಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ, ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್‌ ಒಪ್ಪಿರಲಿಲ್ಲ. ಹೀಗಾಗಿ, ಸಂವಿಧಾನವನ್ನೇ ತಿದ್ದುಪಡಿ ಮಾಡುವ ಮೂಲಕ ಒಬಿಸಿ ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರಳಿ ರಾಜ್ಯಗಳಿಗೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.
ಕರ್ನಾಟಕದಲ್ಲಿ ಪಂಚಮಸಾಲಿ ಲಿಂಗಾಯತರು, ಹರಿಯಾಣದಲ್ಲಿ ಜಾಠ್, ಮಹಾರಾಷ್ಟ್ರದಲ್ಲಿ ಮರಾಠಾ, ಗುಜರಾತಿನಲ್ಲಿ ಪಟೇಲ್ ಸಮುದಾಯದವರು ತಮ್ಮ ಜಾತಿಯನ್ನು ಒಬಿಸಿಗೆ ಸೇರಿಸಬೇಕೆಂದು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ತಿದ್ದುಪಡಿ ಮಸೂದೆಯಿಂದ ಈ ಜಾತಿಗಳ ಜೊತೆಗೆ ಇನ್ನಷ್ಟು ಸಮುದಾಯಗಳು ಒಬಿಸಿ ಸೇರ್ಪಡೆಗೆ ಬೇಡಿಕೆಯಿಡುವ ಸಾಧ್ಯತೆಗಳೂ ಇವೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement