ತಾಯಿಯನ್ನೇ ಕೊಲೆಗೈದ 15 ವರ್ಷದ ಮಗಳು

ಮುಂಬೈ: 15 ವರ್ಷದ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಥಾಣೆಯಲ್ಲಿ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡಲಿ ಎಂದು ಆಸೆ. ಆದರೆ ಅದು ಮಗಳಿಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಜಗಳ ಆಗುತ್ತಿತ್ತು. ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ ನೀಡಿದ್ದಳು. ಆದರೆ ಪೊಲೀಸರು ಅವರಿಬ್ಬರಿಗೂ ಬುದ್ಧಿ ಹೇಳಿ ಕಳುಹಿಸಿದ್ದರು.
ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ’ ಎಂದು ಪೊಲೀಸರಿಗೆ ತಿಳಿಸಿದ್ದಳು.
ಜು.30ರಂದು ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಬಾಲಕಿ, ನನ್ನ ತಾಯಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಳು. ನಂತರ ತಾಯಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿತ್ತು. ಶವದ ಮರಣೋತ್ತರ ಪರೀಕ್ಷೆ ವೇಳೆ ಮಹಿಳೆ ಸಹಜವಾಗಿ ಸತ್ತಿಲ್ಲ. ಕತ್ತು ಹಿಸುಕಿ ಕೊಲ್ಲಲಾಗಿದೆ ಎಂಬ ವಿಚಾರ ಬೆಳಕಿಗೆ ಬಂತು. ಕೂಡಲೇ ಬಾಲಕಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬೆಳಕಿಗೆ ಬಂತು. ಆಕೆ ತಾನು ತನ್ನ ತಾಯಿಯನ್ನು ಕರಾಟೆ ಬೆಲ್ಟ್ ನಿಂದ ಕತ್ತು ಹಿಸುಕಿ ಕೊಂದಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಸದ್ಯ ಬಾಲಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕಿಯನ್ನು ಸೋಮವಾರ ಐಪಿಸಿ ಸೆಕ್ಷನ್‌ 302ರ ಪ್ರಕಾರ ಮೊಕದ್ದಮೆ ದಾಖಲಿಸಿ ಬಂಧಿಸಲಾಗಿದೆ

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement