ನವದೆಹಲಿ: ಮಂಗಳವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಇಂದು (ಬುಧವಾರ) ರಾಜ್ಯಸಭೆಯಲ್ಲಿಯೂ ಅಂಗೀಕಾರವಾಗಿದೆ. ರಾಜ್ಯಸಭಾ ಸದನದಲ್ಲಿ 187 ಮತಗಳ ಬೆಂಬಲದೊಂದಿಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.
ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾದಂತಾಗಿದೆ.
ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು (OBC Reservation Amendment Bill 2021) ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಮೊದಲೇ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ನಿನ್ನೆ ಲೋಕಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿತ್ತು. ಇಂದು ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಿದ್ದು, ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ