ತೆಲಂಗಾಣ: ಕಾರಿನ ಡಿಕ್ಕಿಯಲ್ಲಿ ದಹನವಾದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

ಹೈದರಾಬಾದ್: ತೆಲಂಗಾಣದ ಮೇದಕ್‌ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉದ್ಯಮಿ ವಿ.ಶ್ರೀನಿವಾಸ್ ಪ್ರಸಾದ್ ರ ಸುಟ್ಟ ಕಾರಿನ ಡಿಕ್ಕಿಯಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ಆರೋಪಿಗಳು ಶ್ರೀನಿವಾಸ್ ಅವರ ಕಾರಿನೊಂದಿಗೆ ಬೆಳಿಗ್ಗೆ ಬೆಂಕಿ ಹಚ್ಚಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚಂದನ ದೀಪ್ತಿ ಹೇಳಿದ್ದಾರೆ. ‘ಬೆಂಕಿಯ ಸುದ್ದಿ ಬಂದ ನಂತರ, ಸ್ಥಳಕ್ಕೆ ಧಾವಿಸಿದಾಗ ಕಾರಿನ ಡಿಕ್ಕಿಯಲ್ಲಿ ಶ್ರೀನಿವಾಸ್ ಮೃತದೇಹ ಬಿದ್ದಿರುವುದನ್ನು ನಾವು ನೋಡಿದ್ದೇವೆ. ಆರೋಪಿಯು ಶ್ರೀನಿವಾಸ್ ಗೆ ಕಾರಿನೊಂದಿಗೆ ಬೆಂಕಿ ಹಚ್ಚಿದ್ದಾನೆ ಎಂದು ಅವರು ಹೇಳಿದರು.
ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ ಮತ್ತು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಹೆಚ್ಚಿನ ವಿವರ ತಿಳಿದುಬರಬೇಕಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement