ಕರ್ನಾಟಕದಲ್ಲಿ ಕೊರೊನಾ ಹೊಸ ಸೋಂಕು ಮತ್ತೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕಡಿಮೆಯಾಗಿದ್ದ ಪ್ರಕರಣಗಳ ಸಂಖ್ಯೆ ಬುಧವಾರ (ಕಳೆದ 24 ಗಂಟೆಯಲ್ಲಿ) ಮತ್ತೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 1,826 ಹೊಸ ಸೋಂಕು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 33 ಮಂದಿ ಮೃತಪಟ್ಟಿದ್ದಾರೆ.ಒಟ್ಟು ಸಾವಿನ ಸಂಖ್ಯೆ 36,881ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ ಇಂದು 1,618 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,63,117ಕ್ಕೆ ಏರಿಕೆಯಾಗಿದೆ. ಇನ್ನು 22,851 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಲ್ಲಿ 377 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,31,474ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.09ಕ್ಕೆ ಇಳಿದಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

11-08-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement