ಕೇಂದ್ರೀಯ ಸಂಸ್ಥೆಗಳ ವಿರುದ್ಧ ಕೇರಳ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ

ರಾಜತಾಂತ್ರಿಕ ಚಾನೆಲ್ ಮೂಲಕ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಪಿತೂರಿಯ ಪ್ರಶ್ನೆಯನ್ನು ವಿಶೇಷ ನ್ಯಾಯಾಲಯವು ತನಿಖೆಯ ಮೇಲ್ವಿಚಾರಣೆಯಲ್ಲಿ ಪರಿಶೀಲಿಸಬೇಕೆಂದು ಕೋರ್ಟ್ ಹೇಳಿದೆ.

ತಿರುವನಂತಪುರಂ: ಕೇರಳದ ಪಿಣರಾಯಿ ವಿಜಯನ್ ಸರ್ಕಾರ ನೇಮಿಸಿದ್ದ ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಾಧೀಶರಾದ ವಿ.ಕೆ ಮೋಹನನ್ ನೇತೃತ್ವದಲ್ಲಿ ಕೇರಳ ಸರ್ಕಾರ ರಚಿಸಿದ್ದ ನ್ಯಾಯಾಂಗ ಆಯೋಗಕ್ಕೆ ಹೈಕೋರ್ಟ್ ತಡೆ ನೀಡಿದೆ. ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಪ್ರಕರಣ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ತನಿಖೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರ ಸಮಿತಿ ರಚನೆ ಮಾಡಿತ್ತು.
ಜಾರಿ ನಿರ್ದೇಶನಾಲಯ ಸರ್ಕಾರದ ಅಧಿಸೂಚನೆ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ತನಿಖಾ ಆಯೋಗಕ್ಕೆ ನೊಟೀಸ್ ಜಾರಿಗೊಳಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಹಾಗೂ ಎಸ್. ವಿ. ರಾಜು, ಸಹಾಯಕ ಸಾಲಿಸಿಟರ್ ಜನರಲ್ ಪಿ. ವಿಜಯ್ ಕುಮಾರ್ ಹಾಗೂ ವಿಶೇಷ ಪ್ರಾಸಿಕ್ಯೂಟರ್ ಟಿಎ ಉನ್ನಿಕೃಷ್ಣನ್ ಇ.ಡಿ ಹಾಗೂ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಿಂದ ಮುಖ್ಯಮಂತ್ರಿಗಳು, ಮಂತ್ರಿಗಳ ವಿರುದ್ಧ ಪಿತೂರಿ ನಡೆಸಲಾಗಿತ್ತೇ ಎಂಬ ಬಗ್ಗೆ ತನಿಖೆ ನಡೆಸಲು ಆಯೋಗಕ್ಕೆ ಸೂಚಿಸಲಾಗಿತ್ತು.
ಸೀಮಾ ಸುಂಕ ಹಾಗೂ ಜಾರಿ ನಿರ್ದೇಶನಾಲಯದ ಏಜೆನ್ಸಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಆಡಳಿತ ಪಕ್ಷವನ್ನು ತಪ್ಪಾಗಿ ಸಿಲುಕಿಸಲು ಯತ್ನಿಸುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement