ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ ಕಾರಣವಾಗಿದೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ೧೫ ದಿನಗಳಲ್ಲಿ ಎದುರಾಗಿರುವ ಪಕ್ಷದೊಳಗಿನ ಅಸಮಾಧಾನ ದೂರ ಮಾಡಲು ಅನುಕೂಲವಾಗುವಂತೆ ಪಕ್ಷದ ಹೈಕಮಾಂಡ್ ನೆರವು ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆ ವಿಷಯದ ಕುರಿತು ಚರ್ಚೆ ನಡೆಸಲು ಮುಂದಿನ ವಾರ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆಯಲ್ಲಿ ಹಲವು ಸಚಿವರ ಅತೃಪ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಹೈಕಮಾಂಡ್ ಗಮನಕ್ಕೆ ತಂದು ಅಲ್ಲಿಂದಲೇ ಪರಿಹಾರ ಕಂಡುಕೊಳ್ಳುವ ಪ್ರಯತ್ನಕ್ಕೆ ಮುಂದಾಗಲಿದ್ದಾರೆ ಎನ್ನಲಾಗಿದೆ.
ತಮಗೆ ಬೇಕಾದ ಖಾತೆ ಸಿಗಲಿಲ್ಲ ಎಂದು ಸಚಿವರಾದ ಎಂಟಿಬಿ ನಾಗರಾಜ್ ಮತ್ತು ಅರಣ್ಯ ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅದರಲ್ಲೂ ಆನಂದ್ ಸಿಂಗ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದರ ನಡುವೆ ಸಚಿವ ಸ್ಥಾನ ವಂಚಿತ ರಾಗಿರುವ ರಮೇಶ್ ಜಾರಕಿಹೊಳಿ ಗುಂಪಿನಲ್ಲಿ ಗುರುತಿಸಿಕೊಂಡಿರುವ ಮಹೇಶ್ ಕುಮಟಳ್ಳಿ,ಶ್ರೀಮಂತ ಪಾಟೀಲ್ ಸೇರಿದಂತೆ
ಸಚಿವ ಎಂ ಟಿ ಬಿ ನಾಗರಾಜ್ ಅವರು ತಮಗೆ ನೀಡಿರುವ ಖಾತೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ವಿಜಯನಗರದ ಶಾಸಕ ಆನಂದ್ ಸಿಂಗ್ ಅವರ ಜೊತೆಗೂ ಚರ್ಚಿಸಿದ್ದಾರೆ. ಆದರೆ ಇವರಿಬ್ಬರು ಸಮಾಧಾನವಾದಂತಿಲ್ಲ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾದರೆ ಮೊದಲ ಬಾರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಳಿದ ಶಾಸಕರು ರಾಜೀನಾಮೆ ನೀಡಲು ಪ್ರೋತ್ಸಾಹಿಸಿದನು ನಾನು ನನಗೆ ಉತ್ತಮವಾದ ಖಾತೆ ನೀಡಿಲ್ಲ ಎಂದು ಆಪ್ತರ ಬಳಿ ಅಳಲು ತೋಡಿಕೊಂಡಿದ್ದಾರೆ.
ನನ್ನಿಂದ ಪಕ್ಷಕ್ಕೆ ಏನು ಆಗಿಲ್ಲ ಎನ್ನುವ ರೀತಿ ಪಕ್ಷ ನಡೆದುಕೊಳ್ಳುತ್ತಿದೆ ಇದು ಬೇಸರ ಮತ್ತು ನೋವು ತರಿಸಿದೆ ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ನಿರೀಕ್ಷೆಯಲ್ಲಿದ್ದ ಮೈಸೂರಿನ ರಾಮದಾಸ್, ಕೊಡಗಿನ ಅಪ್ಪಚ್ಚುರಂಜನ್ ಹಾಗೂ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಸೇರಿದಂತೆ ಮತ್ತಿತರರು ದೆಹಲಿ ಯಾತ್ರೆ ನಡೆಸಿದ್ದಾರೆ.
ಬಾಲಚಂದ್ರ ಜಾರಕಿಹೊಳಿ, ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ಮಹೇಶ್ ಕುಮಟಳ್ಳಿ ಸೇರಿದಂತೆ ಅನೇಕ ಸಚಿವಾಕಾಂಕ್ಷಿಗಳು ಸಚಿವ ಸ್ಥಾನ ಸಿಗದೇ ಅಸಮಾಧಾನದಲ್ಲೇ ಇದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದಕ್ಕೆಲ್ಲ ಅಂತ್ಯ ಹಾಡಲು ಇದನ್ನು ಹೈಕಮಾಂಡ್‌ ಮುಂದೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement