ಜಿಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಜಿಲ್ಲಾ ಪಂಚಾಯತ​ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು (ಬುಧವಾರ) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಆದರೆ ಜಾಮೀನು ಅವಧಿಯಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಪ್ರವಶಿದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ.
ಪ್ರಕರಣ ಹೈಕೋರ್ಟ್ ಮುಂದೆ ವಿಚಾರಣೆಗೆ ಬಾಕಿ ಇದೆ ಎಂದು ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್​​ ಗಮನ ಸೆಳೆದರು. ಹೀಗಾಗಿ ಹೈಕೋರ್ಟ್ ಎರಡು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸಬೇಕು ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಮಧ್ಯೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕಿದರೆ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸುವ ಎಚ್ಚರಿಕೆಯನ್ನು ಸುಪ್ರೀಂ ಕೋರ್ಟ್ ನೀಡಿದೆ.

ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆಯನ್ನು ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಂದು ಜಾಮೀನು ನೀಡಿದೆ.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬಿಜೆಪಿ ನಾಯಕ ಯೋಗೇಶ್ ಗೌಡರನ್ನು ಜಿಮ್‌ನಲ್ಲಿ ಜೂನ್ 15, 2016ರಂದು ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಯಾಗಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು 2019ರಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಿಜೆಪಿ ಸರ್ಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಹತ್ಯೆ ಪ್ರಕರಣದ ತನಿಖೆ ಕೈಗೊಂಡ ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.

ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಸಿಕ್ಕರೂ ಹೊರ ಬರಲಾಗದ ಸ್ಥಿತಿ ಎದುರಾಗಿದೆ. ವಿನಯ್​ ಕುಲಕರ್ಣಿ ಮೇಲೆ ಸಾಕ್ಷ್ಯ ನಾಶದ ಪ್ರಕರಣವು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇತ್ತೀಚಿಗಷ್ಟೇ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಜಾಮೀನಿಗಾಗಿ ವಿನಯ್ ಹೈಕೋರ್ಟಿಗೆ  ಹೋಗಿದ್ದಾರೆ. ಪ್ರಕರಣ ವಿಚಾರಣಾ ಹಂತದಲ್ಲಿರುವುದರಿಂದ ಸುಪ್ರೀಂಕೋರ್ಟ್ ಜಾಮೀನು ನೀಡಿದರೂ ಸದ್ಯಕ್ಕೆ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement