ನನ್ನ ರಾಜಕೀಯ ಜೀವನ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬಳಿಯೇ ಆರಂಭವಾಗಿದ್ದು, ಇಲ್ಲಿಯೇ ಅಂತ್ಯವಾಗಲೂಬಹುದು, ಏನೆಂಬುದು ಗೊತ್ತಿಲ್ಲ

ಹೊಸಪೇಟೆ: ನಾನು ರಾಜ್ಯದ ಉನ್ನತ ರಾಜಕಾರಣಿಯೇನಲ್ಲ, ವಿಜಯನಗರ ಜಿಲ್ಲೆಯೊಳಗೆ ಹೊಸಪೇಟೆಯಲ್ಲಿ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿರುವ ರಾಜಕಾರಣಿಯಷ್ಟೆ, ಯಾರನ್ನೂ ಬ್ಲ್ಯಾಕ್ ಮೇಲ್ ಮಾಡುವ ಕೆಲಸ ಮಾಡುವ ತಂತ್ರ ನಾನು ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಇಂದು (ಬುಧವಾರ) ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನನಗೆ ಕೆಲವೊಂದು ನೋವುಗಳಿವೆ ಹೌದು, ಅದನ್ನು ನಾನು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಬಗೆಹರಿಸಿಕೊಳ್ಳಲು ಬಯಸುತ್ತೇನೆ, ಇವತ್ತು ನಾನು ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ತಿಳಿಸಿದರು.
ನನ್ನ ರಾಜಕೀಯ ಜೀವನ ಇದೇ ಹೊಸಪೇಟೆಯ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬಳಿಯಿಂದ ಆರಂಭವಾಯಿತು. ನಮ್ಮ ನಾಯಕರ ಮೇಲೆ ನನಗೆ ನಂಬಿಕೆಯಿದೆ,  ಆದರೆ ಅವರಿಗೆ ನನ್ನ ಮೇಲೆ ವಿಶ್ವಾಸವಿದೆಯೋ, ಇಲ್ಲವೋ ಎಂಬ ಅನುಮಾನ ಬರ್ತಿದೆ  ಎಂದು ಮಾರ್ಮಿಕವಾಗಿ ಹೇಳಿದರು.
ಬಿ. ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದರೆ ನಾನು ಏನೂ ಕೇಳುತ್ತಿರಲಿಲ್ಲ ಎಂದರು.
ನಾನು ಇದೇ ವೇಣುಗೋಪಾಲ ಸನ್ನಿಧಿ ಬಳಿ ರಾಜಕೀಯ ಜೀವನ ಆರಂಭಿಸಿದ್ದು, ಇಲ್ಲಿಯೇ ಅಂತ್ಯವಾಗಲೂ ಬಹುದು, ಏನಾಗುತ್ತದೆಯೆಂದು ಗೊತ್ತಿಲ್ಲ, ಇಲ್ಲಿಂದಲೇ ರಾಜಕೀಯ ಜೀವನ ಪುನರಾರಂಭವಾಗಲೂಬಹುದು ಎಂದ ಅವರು ನನ್ನ ರಾಜಕೀಯ ಜೀವನಕ್ಕೆ 15 ವರ್ಷಗಳಾಗಿವೆ. ಗೋಪಾಲಕೃಷ್ಣನ ಪೂಜೆಯನ್ನು ಮುಗಿಸಿದ್ದೇನೆ. ನನ್ನ ಗೋಪಾಲಸ್ವಾಮಿ ನನ್ನನ್ನು ಕೈಬಿಡುವುದಿಲ್ಲ ಎಂದು ನಂಬಿದ್ದೇನೆ. ಈಗಲೂ ನಾನು ರಾಜಕೀಯ ಪ್ರತಿಕ್ರಿಯೆ ಕೊಡುವಿದಿಲ್ಲ. ಆದರೆ ನಾನು ಯಾರಿಗೆ ಮನವಿ ಮಾಡಬೇಕೋ ಅದನ್ನು ಮಾಡುತ್ತೇನೆ. ಆದರೆ ಅದನ್ನು ಬಹಿರಂಗವಾಗಿ ಹೇಳುವುದಿಲ್ಲ. ಎಲ್ಲವೂ ಆ ಗೋಪಾಲಕೃಷ್ಣನ ಇಚ್ಛೆಯಂತೆ ನಡೆಯುತ್ತದೆ. ನಾನು ಬೆಂಗಳೂರಿಗೆ ಇವತ್ತು ಹೋಗಬೇಕಾ ಅಥವಾ ನಾಳೆ ಹೋಗಬೇಕಾ ಅಂತ ತೀರ್ಮಾನಿಸುತ್ತೇನೆ. ನನ್ನ ಕೆಲಸದ ಬಗ್ಗೆ ನೋಡಿಕೊಂಡು ತೆರಳುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement