ಮಹತ್ವದ ಘೋಷಣೆ..ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಪಾಲಿಕೆಗಳ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ ) ವೇಳಾಪಟ್ಟಿ ಪ್ರಕಟಿಸಿದೆ.
ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಹಾಗೂ ಚಿಕ್ಕಮಗಳೂರು ‌ಜಿಲ್ಲೆಯ ತರಿಕೇರೆ ಪುರಸಭೆಗೂ ಇದೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ.

ಸದ್ಯ ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆಯ ಭೀತಿಯೂ ವ್ಯಾಪಿಸುತ್ತಿದ್ದು ನಗರ ಪಾಲಿಕೆ ಚುನಾವಣೆಗಳ ಇದರ ನಡುವೆಯೇ ನಡೆಯಬೇಕಾದಂತಾಗಿದೆ. ಹೀಗಾಗಿ ಕೊವಿಡ್ ತಡೆ ನಿಯಮಗಳನ್ನು ಅತ್ಯಂತ ಕಠಿಣವಾಗಿ ಜಾರಿಗೊಳಿಸಿ ಮತ್ತು ಅವುಗಳನ್ನು ಪಾಲಿಸಿ ನಗರ ಪಾಲಿಕೆ ಚುನಾವಣೆಗಳು ನಡೆಸಬೇಕಿದೆ.

ಪ್ರಮುಖ ಸುದ್ದಿ :-   ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ರಾಜು ಕಾಗೆಗೆ ಚುನಾವಣೆ ಆಯೋಗದಿಂದ ನೋಟಿಸ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement