ಹಿಮಾಚಲ ಪ್ರದೇಶ: ಕಿನ್ನೌರ್ನಲ್ಲಿ ಭೂಕುಸಿತದಿಂದ 10 ಜನರು ಸಾವು, 14 ಜನರ ರಕ್ಷಣೆ, 50ಕ್ಕೂ ಹೆಚ್ಚು ಸಿಲುಕಿರುವ ಶಂಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭಾರೀ ಭೂಕುಸಿತದಿಂದ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಅವಶೇಷಗಳಲ್ಲಿ ಸಿಲುಕಿರುವ ಶಂಕೆ ಇದೆ.
ಈವರೆಗೆ 14 ಜನರನ್ನು ರಕ್ಷಿಸಲಾಗಿದೆ. “ಕಿನ್ನೌರ್ ಜಿಲ್ಲೆಯ ನುಗುಲಸರಿ ಪ್ರದೇಶದಲ್ಲಿ ಭೂಕುಸಿತದಿಂದಾಗಿ 50-60 ಜನರು ಅವಶೇಷಗಳಲ್ಲಿ ಸಿಲುಕಿಕೊಂಡಿರಬಹುದು” ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ. ಭಾರತೀಯ ಸೇನೆ, ಐಟಿಬಿಪಿ, ಎನ್‌ಡಿಆರ್‌ಎಫ್ ಮತ್ತು ರಾಜ್ಯ ಪೊಲೀಸರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ, ಆದಾಗ್ಯೂ, ಪರ್ವತಗಳಿಂದ ಕಲ್ಲುಗಳು ಬೀಳುವುದು ಅವರ ಕೆಲಸವನ್ನು ಕಷ್ಟಕರವಾಗಿಸುತ್ತಿದೆ.

ಡೆಪ್ಯುಟಿ ಕಮಿಷನರ್ ಅಬಿದ್ ಹುಸೇನ್ ಸಾದಿಕ್ ಪ್ರಕಾರ, 40 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುವ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ (ಎಚ್‌ಆರ್‌ಟಿಸಿ) ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಹೂತು ಹೋಗಿವೆ. ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ಅವರು ಹೇಳಿದರು.
ಸಾಜು ರಾಮ್ ರಾಣಾ ಎನ್ಎಚ್‌ ನಲ್ಲಿ ಭಾಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೂಕುಸಿತದ ಬಗ್ಗೆ ನಮಗೆ ಮಾಹಿತಿ ಇದೆ. ನಾವು ಸ್ಥಳಕ್ಕೆ ಧಾವಿಸುತ್ತಿದ್ದೇವೆ. ಐಟಿಬಿಪಿ, ಪೊಲೀಸ್, ಗೃಹರಕ್ಷಕ ದಳ ಮತ್ತು ರಕ್ಷಣಾ ತಂಡವನ್ನು ನಿಯೋಜಿಸಲಾಗಿದೆ. ತಲುಪಿದ ನಂತರ ನಾವು ಹೆಚ್ಚಿನ ವಿವರಗಳನ್ನು ನೀಡುತ್ತೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಾಜು ರಾಮ್ ರಾಣಾ ಹೇಳಿದರು.
ವರದಿಗಳ ಪ್ರಕಾರ, ಎಚ್‌ಆರ್‌ಟಿಸಿ ಬಸ್ ಸೇರಿದಂತೆ ಹಲವು ವಾಹನಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ಬಸ್‌ನ ಚಾಲಕ ಮತ್ತು ಸಹ ಚಾಲಕ ಗಾಯಗೊಂಡಿದ್ದಾರೆ.
ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬುಧವಾರ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ.
ಜುಲೈನಲ್ಲಿ ಕಿನ್ನೌರ್ ಜಿಲ್ಲೆಯ ಬಸ್ತೇರಿ ಬಳಿ ಬೃಹತ್ ಬಂಡೆಗಳು ತಮ್ಮ ವಾಹನದ ಮೇಲೆ ಬಿದ್ದು ಒಂಬತ್ತು ಪ್ರವಾಸಿಗರು ಸಾವನ್ನಪ್ಪಿದ್ದರು.
ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ದುರಂತ ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement