ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ಚಾಲಕ, ನಿರ್ವಾಹಕನ ಬಂಧನ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಎಂಟಿಸಿ ಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಗಳು. ಇವರು ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು‌ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇವರು ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಒಂದು ಕಿಲೋಗ್ರಾಮ್​ಗೆ 40 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಸುಳಿವು ಪಡೆದ ಕೆಂಗೇರಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತರಿಂದ 9.8 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement