ಗುರುವಾರವೂ ಕೊರೊನಾ ಹೊಸ ಸೋಂಕಿನಲ್ಲಿ ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡ

ಬೆಂಗಳೂರು: ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ (ಗುರುವಾರ) 1857 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ಸಮಯದಲ್ಲಿ 30 ಜನ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,24,732 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ 1950 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ, ಇದುವರೆಗೆ 28,65,067 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 36,911 ಜನ ಸಾವನ್ನಪ್ಪಿದ್ದಾರೆ. 22,728 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.15 ರಷ್ಟಿದೆ.
ಬೆಂಗಳೂರಿನಲ್ಲಿ 321 ಜನರಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ. 413 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8193 ಸಕ್ರಿಯ ಪ್ರಕರಣಗಳು ಇವೆ. ದಕ್ಷಿಣ ಕನ್ನಡದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ದಕ್ಷಿಣಕನ್ನಡದಲ್ಲಿ ಗುರುವಾರ 475 ಹೊಸ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಿಕ್ಕಮಗಳೂರು 107, ದಕ್ಷಿಣಕನ್ನಡ 475, ಹಾಸನ 123, ಕೊಡಗು 93, ಮೈಸೂರು 116, ಉಡುಪಿ 191 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ ನಲ್ಲಿ ಕೆಳಗೆ ಕೊಡಲಾಗಿದೆ.

12-08-2021 HMB Kannada

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement