ಯಾದಿಗಿರಿ  ಕಡೆಚೂರು ಬಳಿ ವಿಶ್ವದರ್ಜೆ ಔಷಧಿ ಪಾರ್ಕ್ ನಿರ್ಮಾಣ: ಕೇಂದ್ರ ಖೂಬಾ ಭೇಟಿಯಾದ ಸಚಿವ ನಿರಾಣಿ

ಯಾದಗಿರಿ: ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ.
ಬುಧವಾರ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ ಬೃಹತ್ ಔಷಧ ಪಾರ್ಕ್ ನಿರ್ಮಿಸಿದರೆ ಈ ಭಾಗಕ್ಕೆ ಹೆಚ್ಚಿನ ನ್ಯಾಯ ಸಿಗುತ್ತದೆ ಎಂದು ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆಯು ಹಿಂದುಳಿದ ಕರ್ನಾಟಕ ಜಿಲ್ಲಾ ವ್ಯಾಪ್ತಿಗೆ ಒಳಪಡಲಿದೆ. 2 ಮತ್ತು 3ನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಹೂಡಿಕೆದಾರರನ್ನು ಆಕರ್ಷಿಸಬೇಕೆಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಯೋಜನೆ ಅನುಷ್ಠಾನಗೊಂಡರೆ ಸುಮಾರು 6 ಸಾವಿರ ಕೋಟಿ ಬಂಡವಾಳವನ್ನು ಆಕರ್ಷಣೆ ಮಾಡಬಹುದು. ಅಂದಾಜು 10 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯು ಕಲಬರುಗಿ ನಗರಕ್ಕೆ ಸಮೀಪದಲ್ಲಿದ್ದು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿದೆ. ರಾಜ್ಯ ಸರ್ಕಾರವು ಔಷಾಧಾಲಯ ಕಾರ್ಖಾನೆಗಳಿಗೆ ಎಲ್ಲ ರೀತಿಯ ನೆರವು ನೀಡಲಿದೆ. ಈ ಯೋಜನೆಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಸಚಿವರಿಗೆ ನಿರಾಣಿ ಮನವಿ ಮಾಡಿದರು.
ರಾಜ್ಯದಲ್ಲಿ ಈಗಾಗಲೇ ತುಮಕೂರು ಮಿಷನರಿ ಟೋಲ್ ಪಾರ್ಕ್, ಹೈಟೆಕ್ ರಕ್ಷಣಾ ಮತ್ತು ವೈಮಾನಿಕ ಪಾರ್ಕ್, ಜಪಾನೀಸ್ ಕೈಗಾರಿಕಾ ಟೌನ್ಶಿಪ್ ಸೇರಿದಂತೆ ಹತ್ತು ಹಲವು ಯೋಜನೆಗಳು ನಿರ್ಮಾಣವಾಗಿದೆ.
ಯಾದಗಿರಿಯ ಕಡೆಚೂರಿನಲ್ಲಿ ವಿಶ್ವದರ್ಜೆಯ ಔಷಧಾಲಯ ಪಾರ್ಕ್ ನಿರ್ಮಾಣಕ್ಕೆ ಒಂದು ಸಾವಿರ ಕೋಟಿ ಆರ್ಥಿಕ ನೆರವು ನೀಡಲು ಸಿದ್ದವಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಯೋಜನೆ ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಸಕಾರಾತ್ಮಕವಾಗಿ ಸ್ಪಂದಿಸಿದ ಭಗವಂತ ಖೂಬಾ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಯೋಜನೆಯನ್ನು ಕಾಲ ಮಿತಿಯೊಳಗೆ ಅನುಷ್ಠಾನಗೊಳಿಸುವ ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement