ಲಿಂಗನಮಕ್ಕಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ: ಶರಾವತಿ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಾರವಾರ: ಶರವಾತಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಕೆಳಗಿನ ನದಿ ತೀರದ ಪ್ರದೇಶಗಳಿಗೆ ಲಿಂಗನಮಕ್ಕಿಯಿಂದ ನೀರು ಬಿಡುವ ಮುನ್ನೆಚ್ಚರಿಕೆ ನೀಡಲಾಗಿದೆ.
ಶರಾವತಿ ಯೋಜನೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳತ್ತಿದ್ದು, ಲಿಂಗನಮಕ್ಕಿ ಜಲಾಶಯಕ್ಕೆನೀರಿನ ಹರಿವುಹೆಚ್ಚಾಗಿದೆ.
ಲಿಂಗನಮಕ್ಕಿ ಜಲಾಶಯದ ಗರಿಷ್ಟ ಮಟ್ಟವು 1819.00 ಅಡಿಗಳಾಗಿದ್ದು , ಜಲಾಶಯದ ಮಟ್ಟ ಆಗಸ್ಟ್‌ 12ರಂದು ಬೆಳಿಗ್ಗೆ 8 ಗಂಟೆಗೆ 1812,00 ಅಡಿಗಳಷ್ಟಕ್ಕೆ ತಲುಪಿದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳಹರಿವು ಸುಮಾರು 11,174 ಕ್ಯೂಸೆಕ್ ಇದೆ. ಇದೇ ಪ್ರಮಾನದಲ್ಲಿ ಜಲಾಶಯಕ್ಕೆ ನೀರಿ ಒಳಹರಿವು ಮುಂದುವರೆದರೆ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಲಿಂಗನಮಕ್ಕಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು ಎಂಬ ಸೂಚನೆಯನ್ನೂ ನೀಡಲಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಶರಾವತಿ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಜನ, ಜಾನವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳಲು ಮುನ್ನೆಚ್ಚರಿಕೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement