ಸ್ವದೇಶಿ ನಿರ್ಮಿತ ಡಿಆರ್‌ಡಿಒ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬಾಲಸೋರ್ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಯ ಸ್ವದೇಶಿ ತಂತ್ರಜ್ಞಾನ ನಿರ್ಮಿತ ಅತ್ಯಾಧುನಿ ಕ್ಷಿಪಣಿ ಉಡಾವಣೆ ಪರೀಕ್ಷೆ ಯಶಸ್ವಿಯಾಗಿದೆ. ಇದರೊಂದಿಗೆ ದೇಶದ ರಕ್ಷಣಾ ಇಲಾಖೆಗೆ ಮತ್ತೊಂದು ಪ್ರಬಲ ಅಸ್ತ್ರ ಸೇರ್ಪಡೆಯಾಗಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಕರಾವಳಿ ಪ್ರದೇಶದ ಅಬ್ದುಲ್ ಕಲಾಂ ದ್ವೀಪದಲ್ಲಿ ಬುಧವಾರ ಬೆಳಗ್ಗೆ ೧೦.೫೫ರಲ್ಲಿ ಈ ಪ್ರಯೋಗ ನಡೆಸಲಾಗಿದ್ದು, ದೇಶೀಯ ಎಂಜಿನ್‌ನೊಂದಿಗೆ ಕ್ಷಿಪಣಿ ೧೫೦ ಕಿ.ಮೀ. ದೂರ ಹಾರಿದೆ.
ಕಳೆದ ತಿಂಗಳು ೨೩ರಂದು ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ (ಆಕಾಶ್-ಎನ್‌ಜಿ) ಇದೇ ಸ್ಥಳದಿಂದ ಯಶಸ್ವಿಯಾಗಿ ನಿಖರ ಗುರಿ ತಲುಪಿತ್ತು. ಕಳೆದ ಎರಡು ದಿನಗಳಲ್ಲಿ ನಡೆದ ಎರಡನೇ ಯಶಸ್ವಿ ಪ್ರಯೋಗ ಇದಾಗಿದೆ. ಅಲ್ಲದೇ ಜೂನ್‌ನಲ್ಲಿ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಸಹ ಹಾರಿಸಲಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

ನಿಮ್ಮ ಕಾಮೆಂಟ್ ಬರೆಯಿರಿ

advertisement