
ಹೊಸಪೇಟೆ : ನನ್ನ ಸಮಸ್ಯೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ. ಖಾತೆ ಬದಲಾವಣೆ ಕುರಿತಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ .ನಾನು ಹೋಗುವುದೂ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಶುಕ್ರವಾರ ಹೊಸಪೇಟೆ ವೇಣುಗೋಪಾಲಸ್ವಾಮಿ ದೇವಾಲಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಹೇಳಿದ್ದೇನೆ. ಯಡಿಯೂರಪ್ಪ ಅವರು ಹಿರಿಯರಾಗಿರುವುದರಿಂದ ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ಆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದಾರೆ ಎಂದರು.
ಆಗಸ್ಟ್ 15ರಂದು ವಿಜಯನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ಮಾಡುತ್ತೇನೆ. ಆನಂತರ ದೆಹಲಿಗೆ ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏನು ನಿರ್ಧಾರ ತೆಗೆದುಕಕೊಳ್ಳುತ್ತಾರೆ ನೋಡೋಣ ಎಂದರು.
ಹೊಸಪೇಟೆಯಲ್ಲಿರುವ ಆನಂದ ಸಿಂಗ್ ಅವರ ಕಚೇರಿ ಕಾರ್ಯರಂಭ ಮಾಡಿದೆ.



ನಿಮ್ಮ ಕಾಮೆಂಟ್ ಬರೆಯಿರಿ