
ಬೆಂಗಳೂರು: ಕೋವಿಡ್ 19 ಕಣ್ಗಾವಲು ನಿಯಂತ್ರಣ ಮತ್ತು ಜಾಗ್ರತೆ ಮಾರ್ಗಸೂಚಿಗಳನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಕಂದಾಯ ಇಲಾಖೆ) ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್- 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಕೊರೊನಾ ಸೋಂಕು ಹರಡುವದನ್ನು ತಡೆಯಲು ಕೇಂದ್ರೀಕೃತ ಕಣ್ಗಾವಲು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುರಿಸುವುದು ಹಾಗೂ ಸ್ಥಳೀಯವಾಗಿ ನಿಯಂತ್ರಿಸಲು ಆರೋಗ್ಯ ತಜ್ಞರು ಸೂಚಿಸಿದ್ದಾರೆ. ಹೀಗಾಗಿ ದಿನಾಂಕ 3:07:2021 ರಲ್ಲಿ ಹೊರಡಿಸಲಾದ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಮತ್ತುಈ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವನ್ನು ರಾಜ್ಯಾದ್ಯಂತ ದಿನಾಂಕ 30:08:2021 ರ ಬೆಳಗ್ಗ 6 ಗಂಟೆ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ತಮ್ಮ ಕಾರ್ಯ ಕ್ಷೇತ್ರದ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ಹೊರಡಿಸಿದ್ದಾರೆ. ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಇಲಾಖೆ ದಿನಾಂಕ 31:07:2021 ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸಲು ಸೂಚನೆ ನೀಡಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ