ಬೆಂಗಳೂರು : ರಾಜ್ಯದಲ್ಲಿ ಐದು ಜಿಲ್ಲೆಗಳಲ್ಲಿ ಕೊರೊನಾ ಹೊಸ ಸೋಂಕಿನಲ್ಲಿ ಏರಿಕೆಯಾಗಿದೆ. ಮೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ಕೂಡ ವರದಿಯಾಗಿದೆ.
ಶುಕ್ರವಾರ 1,669 ಜನರಿಗೆ ಕೊರೊನಾ ಹೊಸ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 1672 ಜನರು ಗುಣಮುಖುರಾಗಿ ಬಿಡುಗಡೆಯಾಗಿದ್ದಾರೆ.22 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 29,26,401ಕ್ಕೆ ಏರಿಕೆಯಾಗಿದೆ. ಆ ಪೈಕಿ 36,933 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 28,66,739 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 22,728 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 425 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 390, ಉಡುಪಿ 115, ಹಾಸನ 113, ಮೈಸೂರು 106, ಕೊಡಗು 73, ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.98 ರಷ್ಟಿದ್ದು, ಮರಣ ಪ್ರಮಾಣ ಶೇ.1.31 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ