ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16ರ ವರೆಗೂ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ.
ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು ಕ್ಷೀಣಗೊಂಡಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದು ವರಿಯಲಿದ್ದು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಆದರೆ, ಸದ್ಯಕ್ಕೆ ಭಾರೀ ಮಳೆಯಾಗು ಮುನ್ಸೂಚನೆಗಳಿಲ್ಲ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement