ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ (ಶನಿವಾರ) 1632 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದೇ ಸಮಯದಲ್ಲಿ 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಗಳು ತಿಳಿಸಿವೆ.
1612 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2868351ಕ್ಕೆ ತಲುಪಿದೆ.
ಮೃತಪಟ್ಟವರ ಸಂಖ್ಯೆ 36,958ಕ್ಕೆ ಏರಿಕೆಯಾಗಿದೆ.
ರಾಜಯದಲ್ಲಿ ಒಟ್ಟು 22698 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸೋಂಕಿನ ಖಚಿತ ಪ್ರಕಣಗಳ ಶೇಕಡಾವಾರ ಪ್ರಮಾಣ (ಪಾಸಿಟಿವಿಟಿ ದರ) 1.04 % ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.53 % ಇದೆ ಎಂದು ವರದಿಗಳಲ್ಲಿನ ಅಂಕಿ-ಅಂಶಗಳು ತಿಳಿಸಿವೆ.
ಪ್ರಮುಖವಾಗಿ ಬೆಂಗಳೂರು ನಗರದಲ್ಲಿ 377, ದಕ್ಷಿಣ ಕನ್ನಡ 411, ಮೈಸೂರಿನಲ್ಲಿ 112 ಕೇಸ್, ಉಡಪಿಯಲ್ಲಿ 169 ಪ್ರಕರಣಗಳು ವರದಿಯಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ