ಮಹಾರಾಷ್ಟ್ರದಲ್ಲಿ ಕೋವಿಡ್ ಡೆಲ್ಟಾ ಪ್ಲಸ್‌ನಿಂದ ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಮುಂಬೈ: ಕೊರೊನಾದ ರೂಪಾಂತರ ತಳಿ ‘ಡೆಲ್ಟಾ ಪ್ಲಸ್’ನಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ ಮಹಾರಾಷ್ಟ್ರದಲ್ಲಿ ಐದಕ್ಕೆ ಏರಿಕೆಯಾಗಿದೆ.
ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್‌ ಅನ್ನು ಹಂತಹಂತವಾಗಿ ತೆರವುಗೊಳಿಸುತ್ತಿರುವ ಸಂದರ್ಭದಲ್ಲೇ ‘ಡೆಲ್ಟಾ ಪ್ಲಸ್’ ಪ್ರಸರಣ ಹೆಚ್ಚುತ್ತಿರುವುದು ಮಹಾರಾಷ್ಟ್ರದಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 15ರಿಂದ ಎರಡು ಡೋಸ್ ಲಸಿಕೆ ಪಡೆದವರಿಗೆ ಮುಂಬೈ ಮೆಟ್ರೊಪಾಲಿಟನ್ ಪ್ರದೇಶದ ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.
ಇದುವರೆಗೆ ಮಹಾರಾಷ್ಟ್ರದಲ್ಲಿ 66 ‘ಡೆಲ್ಟಾ ಪ್ಲಸ್’ ಪ್ರಕರಣಗಳು ವರದಿಯಾಗಿದೆ.ರತ್ನಾಗಿರಿಯಲ್ಲಿ 80 ವರ್ಷದ ಮಹಿಳೆಯೊಬ್ಬರು ಜೂನ್‌ನಲ್ಲಿ ಕೋವಿಡ್‌ನಿಂದ ಮೃತಪಟ್ಟಿದ್ದರು. ಅದು, ರಾಜ್ಯದಲ್ಲಿ ಡೆಲ್ಟಾ ಪ್ಲಸ್‌ನ ಮೊದಲ ‍ಪ್ರಕರಣವಾಗಿತ್ತು. ಕಳೆದ ಕೆಲವು ದಿನಗಳಲ್ಲಿ ಮುಂಬೈ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಎರಡು ಮಂದಿ ಮೃತಪಟ್ಟಿದ್ದರು.
ರಾಯಗಡದ ನಾಗೊಠಾಣೆಯಲ್ಲಿ ‘ಡೆಲ್ಟಾ ಪ್ಲಸ್’ ತಗುಲಿದ್ದ 69 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಜುಲೈ 24ರಂದು ಮೃತಪಟ್ಟ ಮಹಿಳೆಯೊಬ್ಬರ ಕೋವಿಡ್ ಪರೀಕ್ಷಾ ವರದಿಯಲ್ಲಿ ‘ಡೆಲ್ಟಾ ಪ್ಲಸ್’ ದೃಢಪಟ್ಟಿತ್ತು ಎಂದು ಮುಂಬೈ ನಗರಾಡಳಿತ ತಿಳಿಸಿದೆ. ಮತ್ತೊಂದು ಸಾವು ರತ್ನಾಗಿರಿಯಲ್ಲಿ ಸಂಭವಿಸಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದಿಂದ ದೂರವಾಣಿ ಕರೆ ; ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ ; ಮಿಲಿಟರಿ ಕಾರ್ಯಾಚರಣೆಗಳು ಸ್ಥಗಿತ | ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement