ಹಿಮಾಚಲ ಪ್ರದೇಶ ಕಿನ್ನೌರ್ ಭೂಕುಸಿತ: ಮೃತರ ಸಂಖ್ಯೆ 24ಕ್ಕೆ ಏರಿಕೆ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕ ಏರಿದೆ.
ಈ ದುರ್ಘಟನೆಯಲ್ಲಿ ಕಲ್ಲು ಹಾಗೂ ಮಣ್ಣಿನ ಅವಶೇಷಗಳಡಿ ಈಗಲೂ 10ಕ್ಕೂ ಹೆಚ್ಚು ಮಂದಿ ಸಿಲುಕಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
ಈ ದುರಂತದಲ್ಲಿ 13 ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ 40 ಪ್ರಯಾಣಿಕರೊಂದಿಗೆ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಡಿದಾದ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ.
ಕಲ್ಲುಬಂಡೆಗಳ ಮತ್ತು ಮಣ್ಣಿ ಅವಶೇಷಗಳಡಿ ಬಸ್ ಸೇರಿದಂತೆ ಹಲವು ವಾಹನಗಳು ಸಿಲುಕಿದ್ದವು. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಈಗಲೂ ಕಲ್ಲುಗಳು ಉರುಳುತ್ತಿದ್ದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

ನಿಮ್ಮ ಕಾಮೆಂಟ್ ಬರೆಯಿರಿ

advertisement