ಕರ್ನಾಟಕದಲ್ಲಿ ಭಾನುವಾರ 12 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಹೊಸ ಸೋಂಕು, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಕರಣ

ಬೆಂಗಳೂರು :ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,431 ಜನರಿಗೆ ಕೋವಿಡ್ ಸೋಂಕು ದೃಢಪಟ್ಟ ವರದಿಯಾಗಿದೆ ಇದೇವೇಳೆ 21 ಸೋಂಕಿತರು ಮೃತಪಟ್ಟಿದ್ದಾರೆ.
ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬಕ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇದೇವೇಳೆ 1,611 ಜನರು ಚೇತರಿಸಿಕೊಂಡು ಸೋಂಕಿನಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ. ಒಟ್ಟು 28,69,962 ಸೋಂಕಿತರು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 8,166 ಸೇರಿದಂತೆ ರಾಜ್ಯದಲ್ಲಿ 22,497 ಸಕ್ರಿಯ ಪ್ರಕರಣಗಳಿವೆ.
.ಬೆಂಗಳೂರು ನಗರ 305, ದಕ್ಷಿಣ ಕನ್ನಡ 311, ಉಡುಪಿ-177 ಹಾಸನ 87, ಕೊಡಗು – 82, ಮೈಸೂರು – 83 ಮತ್ತು ಸೇರಿದಂತೆ ಹೆಚ್ಚಿನ ಪ್ರಕರಣಗಳು ವರದಿಯಾದ ಜಿಲ್ಲೆಗಳಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

15-08-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement