ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ (ಆಗಸ್ಟ್‌15)ರಿಂದ  ಆಗಸ್ಟ್ 17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಭಾರತವಷ್ಟೇ ಅಲ್ಲ, ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಉಡುಪಿ ಜಿಲ್ಲೆಯಲ್ಲಿ 3 ದಿನ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಆ. 17ರವರೆಗೂ ಮಳೆಯಾಗಲಿದೆ. ಧಾರವಾಡ, ಹಾವೇರಿ, ಗದಗ, ಬೀದರ್, ಬಾಗಲಕೋಟೆ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನಲ್ಲಿ ಮಂಗಳವಾರದವರೆಗೂ ಚದುರಿದ ಮಳೆಯಾಗಲಿದೆ.ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement