ಕೇಂದ್ರ ಸರ್ಕಾರದಿಂದ ಸ್ವಸಹಾಯ ಸಂಘಗಳಿಗೆ `ಇ-ಕಾಮರ್ಸ್’ ಮಾರುಕಟ್ಟೆ ಸೌಲಭ್ಯ: ಮಹಿಳೆಯರಿಗೆ ಸಿಹಿಸುದ್ದಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಸ್ವಸಹಾಯ ಸಂಘಗಳಿಂದ ತಯಾರಾದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇ-ಕಾರ್ಮಸ್ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಇಂದು (ಶನಿವಾರ) 75 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶಾದ್ಯಂತ ಅನೇಕ ಹಳ್ಳಿಗಳು ಸುಮಾರು 8 ಕೋಟಿ ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. ತಮ್ಮ ಸಂಘಗಳ ಮೂಲಕ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಆದರೆ ಅದೆಷ್ಟೋ ಮಂದಿಗೆ ಮಾರುಕಟ್ಟೆ ಸೌಲಭ್ಯ ಇಲ್ಲದೇ ಕಷ್ಟಪಡುತ್ತಿದ್ದಾರೆ. ಅವರಿಗೆ ಮಾರುಕಟ್ಟೆ ಹಿಡಿಯುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಇಂತಹ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಅವರಿಗೆ ಸರ್ಕಾರ ಇ-ಕಾಮರ್ಸ್‌ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಅವರು ತಿಳಿಸಿದ್ದಾರೆ.
ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ದೇಶಿಯವಾಗಿ ಹಾಗೂ ಅಷ್ಟೇ ಅಲ್ಲದೆ, ವಿದೇಶಗಳಲ್ಲೂ ಮಾರುಕಟ್ಟೆ ಸೌಕರ್ಯ ಸಿಗುವಂತಾಗಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಸರ್ಕಾರವೇ ಇ-ಕಾರ್ಮಸ್ ವೇದಿಕೆ ಸೃಷ್ಟಿಸಿಕೊಡಲಿದೆ ಎಂದು ಭರವಸೆ ನೀಡಿದ್ದು, ಮಹಿಳೆಯರು ಸ್ವಸಹಾಯ ಸಂಘಗಳ ಮೂಲಕ ತಯಾರಿಸುವ ಉತ್ಪನ್ನಕ್ಕೆ ಮಾರುಕಟ್ಟೆ ದೊರಕಿಸಿಕೊಡುವ ಅಭಯ ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement