ಧ್ವಜಸ್ತಂಭ ನಿಲ್ಲಿಸುವಾಗ ಅವಘಡ:ವಿದ್ಯುತ್‌ ಪ್ರವಹಿಸಿ ಬಾಲಕ ಸಾವು

ತುಮಕೂರು: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಆಗಿ ಬಾಲಕನೊಬ್ಬ ಮೃತಪಟ್ಟ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.
ತುಮಕೂರು ತಾಲ್ಲೂಕಿನ ಕರಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ,ಕಾರ್ಯಕ್ರಮಕ್ಕೆ ಧ್ವಜಸ್ತಂಭ ನಿಲ್ಲುಸುವಾಗ ಅಆಕಸ್ಮಾತ್‌ ಕಂಬ ವಿದ್ಯುತ್‌ ತಂತಿಮೇಲೆ ಬಿದ್ದು ಈ ಅವಘಡ ಸಂಭವಿಸಿದೆ. ಇದು ಕಬ್ಬಿಣದ ಕಂಬವಾಗಿದ್ದರಿಂದ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಆಗಿ ಮೂವರಿಗೆ ವಿದ್ಯುತ್‌ ಪ್ರವಹಿಸಿದೆ. ಅದರಲ್ಲಿ ೧೬ ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇಬ್ಬರು ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗೋಕರ್ಣ: ಪ್ರವಾಸಕ್ಕೆ ಬಂದಿದ್ದ ಬಾಲಕನಿಗೆ ಕಚ್ಚಿದ ಹಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement