ಧ್ವಜಾರೋಹಣ ಮಾಡಲು ಸಚಿವೆ ಶಶಿಕಲಾ ಜೊಲ್ಲೆಗೆ ಮಹಿಳೆಯರಿಂದ ಅಡ್ಡಿ

ವಿಜಯಪುರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕಾರ್ಯಕರ್ತರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಇಂದು ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣಕ್ಕೆ ಆಗಮಿಸುತ್ತಿದ್ದಂತೆ ನೂರಾರು ಮಹಿಳೆಯರು ಸಚಿವೆ ಜೊಲ್ಲೆಗೆ ಮುತ್ತಿಗೆ ಹಾಕಿ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದರು. ಸ್ಥಳದಲ್ಲೇ ಧರಣಿ ಕುಳಿತು ಭ್ರಷ್ಟಾಚಾರ ಆರೊಪ ಹೊತ್ತಿರುವವರಿಗೆ ಬಸವನಾಡಿನಲ್ಲಿ ಧ್ವಜಾರೋಹಣಕ್ಕೆ ಬಿಡುವುದಿಲ್ಲ. ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ಮಾಡುವಂತಿಲ್ಲ ಎಂದು ಧಿಕ್ಕಾರ ಕೂಗಿದರು.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಮಹಿಳೆಯರನ್ನು ವಶಕ್ಕೆ ಪಡೆದರು. ವಿರೋಧದ ನಡುವೆಯೂ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ನಿಮ್ಮ ಕಾಮೆಂಟ್ ಬರೆಯಿರಿ

advertisement