ಬದುಕಿದ್ದರೆ ಇದೇ ಅವಧಿಗೆ ಸಿಎಂ ಆದರೂ ಆಗಬಹುದು: ಉಮೇಶ್ ಕತ್ತಿ

ಬಾಗಲಕೋಟೆ: ಬದುಕಿದ್ದರೆ ಇದೇ ಅವಧಿಯಲ್ಲಿ ಮುಂದಿನಗಳಲ್ಲಿ ಮುಖ್ಯಮಂತ್ರಿ ಆದರೂ ಆಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮನದಿಂಗಿತ ವ್ಯಕ್ತಪಡಿಸಿದ್ದು ಹೀಗೆ.
ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವರು, ತೆರೆದ ವಾಹನದ ಮೂಲಕ ಪರೇಡ್ ವೀಕ್ಷಣೆ ಮಾಡಿದರು.
ನಂತರ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯವರೇ ಆದಲ್ಲಿ ಒಳ್ಳೆಯದು. ಅಭಿವೃದ್ಧಿಗೆ ಅನುಕೂಲ. ನನಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಆಗುವ ಆಸೆ ಇದೆ. ಆದರೆ ಆಯಾ ಜಿಲ್ಲೆಯವರೇ ಉಸ್ತುವಾರಿ ಆಗಬಾರದು ಎಂಬುದು ಪಕ್ಷದ ನಿರ್ಧಾರವಾಗಿದೆ ಎಂದರು.
ಇಂದಿರಾ ಕ್ಯಾಟೀನ್‍ಗೆ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡುವ ಉದ್ದೇಶ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಜರುಗಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಒಟ್ಟು 402.62 ಕೋಟಿ ರೂ.ವೆಚ್ಚದಲ್ಲಿ 376.22 ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಕೊರೊನಾ ಲಸಿಕೆ ನೀಡುವ ಜೊತೆಗೆ ರೋಗವನ್ನು ಹತೋಟಿಗೆ ತರಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ಸಮಯದಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಲೋಕೇಶ ಜಗಲಸಾರ, ಮುಧೋಳ ವೃತ್ತದ ಸಿಪಿಐ ದಾದಪೀರ ಅತ್ತಾವರ ಸೇರಿದಂತೆ ಹಾಗೂ ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ, ಸೈನಿಕರು ಮತ್ತು ರಾಷ್ಟ್ರ ಮತ್ತು ರಾಜ್ಯಮಟ್ಟದ ಕ್ರೀಡಾಪಟುಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement