ಕರ್ನಾಟಕದಲ್ಲಿ ಸೋಮವಾರ ಕೊರೊನಾ ಹೊಸ ಸೋಂಕು ಕುಸಿತ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕೊರೊನಾ ಹೊಸ ಸೋಂಕಿನ ಪ್ರಕರಣ ಕಡಿಮೆಯಾಗಿದೆ.
ಕಳೆದ 24 ತಾಸಿನಲ್ಲಿ 1,065 ಕೊರೊನಾ ಹೊಸ ಸೋಂಕು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,30,529ಕ್ಕೆ ಏರಿಕೆಯಾಗಿದೆ.
ಇದೇ ಸಮಯದಲ್ಲಿ 28 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,007ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ 1,486 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,71,448ಕ್ಕೆ ಏರಿಕೆಯಾಗಿದೆ. ಇನ್ನು 22,048 ಸಕ್ರೀಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಸೋಮವಾರ 270 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 12,33,172ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 4 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93ಕ್ಕೆ ಇಳಿದಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

16-08-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement