ಬೆಂಗಳೂರಿನ ಮನೆಯಲ್ಲಿ ತಡರಾತ್ರಿ ನಿಗೂಢ ಸ್ಫೋಟ: ದಂಪತಿಗೆ ಗಾಯ

ಬೆಂಗಳೂರು: ಬೆಂಗಳೂರಿನ ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಭಾರಿ ಸ್ಫೋಟದಿಂದ ದಂಪತಿ ಗಾಯಗೊಂಡ ಘಟನೆ ನಡೆದಿದೆ. ತಡರಾತ್ರಿ 12.45ರ ಸುಮಾರಿಗೆ 2 ಮಹಡಿ ಕಟ್ಟಡದಲ್ಲಿ ಈ ಸ್ಫೋಟ ಸಂಭವಿಸಿದೆ.
ಹಂಪಿನಗರದ ಎರಡು ಅಂತಸ್ತಿನ ಮನೆಯೊಂದರ ಮೊದಲ ಮಹಡಿಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ, ಪತ್ನಿ ಪುಷ್ಪಾವತಮ್ಮ ವೃದ್ಧ ದಂಪತಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿವೆ.ಹಾಗೂ ಅಕ್ಕಪಕ್ಕದ ಮನೆ ಗಾಜುಗಳು ಪುಡಿ, ಪುಡಿಯಾಗಿವೆ.
ನಿಗೂಢ ಸ್ಫೋಟದಿಂದ 5ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಯ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಕಟ್ ಆಗಿದೆ. ಸುಮಾರು 1 ಕಿ.ಮೀ.ವರೆಗೂ ಸ್ಫೋಟದ ಸದ್ದು ಕೇಳಿಸಿದೆ. ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮನೆಯ ಡೋರ್, ಗ್ರಿಲ್ ಛಿದ್ರವಾಗಿದೆ.
ಮೊದಲು ಇದು ಸಿಲಿಂಡರ್ ಸ್ಫೋಟ ಆಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಮನೆಯಲ್ಲಿದ್ದ 2 ಸಿಲಿಂಡರುಗಳು ಹಾಗೆಯೇ ಇವೆ. ಹೀಗಾಗಿ ಫ್ರಿಜ್‌ ಯಾವುದಾದರೂ ಸ್ಫೋಟವಾಗಿರಬಹುದೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement